Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ:ಆ.17 . ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಆ.17 ರ ಬುಧವಾರ ನಡೆದಿದೆ.

ಬ್ರಹ್ಮಗಿರಿಯಲ್ಲಿ ಹಾಕಿರುವ ವೀರ್ ಸಾವರ್ಕರ್ ಬ್ಯಾನರ್ ಗೆ ವಿರೋಧಿಸಿದ್ದ ಕಾಂಗ್ರೆಸ್ ವಿರೋಧಿಸಿದ ಹಿನ್ನಲೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕಲು ಯತ್ನಿಸಿದೆ.

ಮೊದಲು ಸಾವರ್ಕರ್ ಬ್ಯಾನರ್ ಗೆ ಮಾಲಾರ್ಪಣೆ ಮಾಡಿದ ಬಿಜೆಪಿ ಕಾರ್ಯಕರ್ತರು ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ತೆರಳಿದ್ದಾರೆ. ಈ ವೇಳೆ ತಡೆದ ಪೊಲೀಸರನ್ನು ವಶಕ್ಕೆ ಪಡೆದು ವಾಪಾಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment