Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಚಿತ್ರದುರ್ಗ: ಕಾರು-ಲಾರಿ ನಡುವೆ ಡಿಕ್ಕಿ; ಮೂವರ ದುರ್ಮರಣ

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಜಾಜಿನಗರ ಮನೀಷ್, ಪತ್ನಿ ಸಿಂಚನಾ ಹಾಗೂ ಸಹೋದರಿ ಭೂಮಿಕಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಗಿರಿಧರ್, ಆಶಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ಐವರು ತೆರಳುತ್ತಿದ್ದರು. ಸೀಬಾರ ಸಮೀಪ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಗುದ್ದಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಗುದ್ದಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

No Comments

Leave A Comment