Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 5 ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆ

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಆರು ದಿನಗಳ ನಂತರ ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಚಿತ್ರದುರ್ಗ ಪೊಲೀಸರು ಅವರನ್ನು ಬಂಧಿಸಿದ್ದರು. ಇಂದು ಆರೋಪಿ ಶ್ರೀಗಳನ್ನು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಈ ವೇಳೆ ಆರೋಪಿ ಶ್ರೀಗಳನ್ನು ವಿಚಾರಣೆಗಾಗಿ ಐದು ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ಇಂದು ಬೆಳಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸತತ 2 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿದ ಮೂವರು ವೈದ್ಯರ ತಂಡ. ಚೆಸ್ಟ್ ಸ್ಕ್ಯಾನ್, ಇಸಿಜಿ, ಎಕೊ, ಎಂ ಆರ್ ಐ ಸ್ಕ್ಯಾನ್ ಹೀಗೆ ಹಲವು ಪರೀಕ್ಷೆಗಳನ್ನು ನಡೆಸಿದರು. ಶ್ರೀಗಳು ಎದೆನೋವು ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸೂಕ್ಷ್ಮ ಪರಿಸ್ಥಿತಿಯಲ್ಲಿರುವುದರಿಂದ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.

No Comments

Leave A Comment