Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ದುಬೈನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಪ್ರಜ್ಞಾಹೀನಳಾಗಿ ಬಿದ್ದ ಮಹಿಳೆ ಸಾವು

ಕೊಚ್ಚಿ, ಸೆ 11. ದುಬೈನಿಂದ ಬಂದಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಬಳಿಕ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರನ್ನು ಮಿನಿ (56) ಎಂದು ಗುರುತಿಸಲಾಗಿದೆ.

ಮಿನಿ ಅವರು ದುಬೈನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದು, ಹಾರಾಟದ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ವಿಮಾನ ಲ್ಯಾಂಡ್ ಆದ ಬಳಿಕ ಆಕೆಯನ್ನು ಕೊಚ್ಚಿಯ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಇಂದು ಸಾವನ್ನಪ್ಪಿದ್ದಾರೆ.

No Comments

Leave A Comment