Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ:ಸೆ 12. ಮಠದ ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ಮುಂದೂಡಿದ್ದು, ಮಂಗಳವಾರ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ಇನ್ನು ಅರ್ಜಿ ವಿಚಾರಣೆಯ ವೇಳೆ ಸಂತ್ರಸ್ತೆಯರು ಕೋರ್ಟ್‌ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಜಾಮೀನಿಗೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದು, ಪೋಕ್ಸೋ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಪರಮಶಿವಯ್ಯ ಮತ್ತು ಬಸವಾದಿತ್ಯ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

No Comments

Leave A Comment