Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಅ.16ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ:ಡಿ.ಕೆ.ಶಿವಕುಮಾರ್

ರಾಯಚೂರು:ಸೆ 12. ಅಕ್ಟೋಬರ್ 16ರಂದು ಬೆಂಗಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಟೋಬರ್ 16ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಾನು ಅಧ್ಯಕ್ಷನಾಗಿ ಎರಡು ವರ್ಷ ಮುಗಿದಿದೆ. ಮತ್ತೊಮ್ಮೆ ಸ್ಪರ್ಧಿಸಬೇಕೆ ಎನ್ನುವ ಬಗ್ಗೆ ನಿರ್ಧರಿಸಿಲ್ಲ. ಪಕ್ಷದ ಮುಖಂಡರು ನಿರ್ಧರಿಸುತ್ತಾರೆ ಎಂದರು.

ಇನ್ನು ಬಿಜೆಪಿಯವರು ಕಾಂಗ್ರೆಸ್ ನವರ ಹಗರಣ ಬಯಲಿಗೆ ಎಳೆಯುತ್ತೇವೆ ಎನ್ನುತ್ತಾರೆ. ಮೂರು ವರ್ಷದಿಂದ ಮಾಡದವರು ಈಗ ಮಾಡುತ್ತಾರಾ? ಮತ್ತೇಕೆ ತಡ ಮಾಡುತ್ತಿದ್ದಾರೆ, ಕೂಡಲೇ ತನಿಖೆ ಆರಂಭಿಸಲಿ ಎಂದು ಹೇಳಿದ್ದಾರೆ.

No Comments

Leave A Comment