Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಸುಲಿಗೆ ಪ್ರಕರಣ: ಜಾಕ್ವೆಲಿನ್ ನಂತರ ವಿಚಾರಣೆಗೆ ಹಾಜರಾಗಲು ನಟಿ ನೋರಾ ಫತೇಹಿಗೆ ದೆಹಲಿ ಪೊಲೀಸರ ಸಮನ್ಸ್

ನವದೆಹಲಿ: ವಂಚಕ ಸುಖೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಬುಧವಾರ ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು, ಫರ್ನಾಂಡೀಸ್ ಅವರನ್ನು ಚಂದ್ರಶೇಖರ್ ಗೆ ಪರಿಚಯಿಸಿದ ನಟಿ ನೋರ್ ಫತೇಹಿ  ಗುರುವಾರ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ.

ಶ್ರೀಲಂಕಾದ ಜಾಕ್ವೆಲಿನ್ ಫರ್ನಾಂಡೀಸ್ ಮೂರನೇ ಬಾರಿ ಸಮನ್ಸ್ ನೀಡಿದ ನಂತರ ವಿಚಾರಣೆಗೆ ಹಾಜರಾಗಿದ್ದರು. ಚಂದ್ರಶೇಖರ್‌ಗೆ ಸಂಬಂಧಿಸಿದ ಬಹುಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡೀಸ್ ಅವರ ಪಾತ್ರ ಮತ್ತಿತರ ವಿಷಯಗಳ ಜೊತೆಗೆ ಅವರು  ಪಡೆದ ಉಡುಗೊರೆಗಳ ಬಗ್ಗೆ ಫರ್ನಾಂಡೀಸ್ ವಿಚಾರಣೆ ನಡೆಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ (ಅಪರಾಧ) ರವೀಂದ್ರ ಯಾದವ್ ಹೇಳಿದ್ದಾರೆ.

ಫರ್ನಾಂಡಿಸ್ ಮತ್ತು ಇರಾನಿ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದು, ಕೇಳಿದ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದ್ದಾರೆ.  ಆಕೆಯನ್ನು ಮತ್ತೆ ವಿಚಾರಣೆಗೆ ಕರೆಯಲಾಗುವುದು ಆದರೆ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಏಜೆನ್ಸಿ ಈಗಾಗಲೇ ನೋರಾ ಫತೇಹಿಯನ್ನು ಆರರಿಂದ ಏಳು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದೆ ಮತ್ತು ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆಯಾದರೂ ಕೆಲವು ಉತ್ತರವಿಲ್ಲದ ಪ್ರಶ್ನೆಗಳು” ಇರುವುದರಿಂದ ಗುರುವಾರ ಅವಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದರು.

ಆದಾಗ್ಯೂ, ಇಬ್ಬರು ನಟಿಯರು ನಡುವೆ ಯಾವುದೇ ನೇರ ಸಂಪರ್ಕ ಹೊಂದಿರುವುದನ್ನು ಅಧಿಕಾರಿ ನಿರಾಕರಿಸಿದ್ದಾರೆ.  ಪ್ರಸ್ತುತ ಜೈಲಿನಲ್ಲಿರುವ ಚಂದ್ರಶೇಖರ್ ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಂತಹ ಉನ್ನತ ವ್ಯಕ್ತಿಗಳು ಸೇರಿದಂತೆ ಅನೇಕ ಮಂದಿಯನ್ನು ವಂಚಿಸಿದ ಆರೋಪ ಹೊತ್ತಿದ್ದಾರೆ. ಈ ಪ್ರಕರಣದಲ್ಲಿ ಫತೇಹಿ ಅವರನ್ನು ಜಾರಿ ನಿರ್ದೇಶನಾಲಯ ಈ ಹಿಂದೆ ವಿಚಾರಣೆ ನಡೆಸಿತ್ತು.

No Comments

Leave A Comment