Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿ ರತನ್ ಟಾಟಾ ಸಹಿತ ಹಲವರ ನಾಮನಿರ್ದೇಶನ

ನವದೆಹಲಿ:ಸೆ 21. ಕೈಗಾರಿಕೋದ್ಯಮಿ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ, ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಸೇರಿದಂತೆ ಗಣ್ಯ ವ್ಯಕ್ತಿಗಳನ್ನು ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸರ್ಕಾರ ಬುಧವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಪಿಎಂ ಕೇರ್ಸ್ ಫಂಡ್ ನ ನೂತನ ಟ್ರಸ್ಟಿಗಳಾಗಿ ಆಯ್ಕೆಯಾಗಿರುವವರನ್ನು ಪ್ರಧಾನಮಂತ್ರಿ ಸಚಿವಾಲಯ ಸ್ವಾಗತಿಸಿರುವುದಾಗಿ ತಿಳಿಸಿದೆ. ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಿಎಂ ಕೇರ್ಸ್ ಟ್ರಸ್ಟಿಗಳಾಗಿ ನೇಮಕಗೊಂಡಿದ್ದಾರೆ.

ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ಮಾಜಿ ಆಡಿಟರ್ ಜನರಲ್ ಆಫ್ ಇಂಡಿಯಾದ ರಾಜೀವ್ ಮಹರ್ಷಿ, ಇನ್ಫೋಸಿಸ್ ಫೌಂಡೇಶನ್ ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾರ್ಪ್ಸ್ ಮಾಜಿ ಸಿಇಓ ಆನಂದ್ ಶಾ ಅವರನ್ನು ನೇಮಕ ಮಾಡಲು ಟ್ರಸ್ಟ್ ನಿರ್ಧರಿಸಿದೆ.

No Comments

Leave A Comment