Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಅ.10.ನಟ ರಮೇಶ್ ಅರವಿಂದ್​ಗೆ ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ

ಕೋಟತಟ್ಟು ಗ್ರಾಮ ಪಂಚಾಯಿತಿ ಮತ್ತು ಕೋಟ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ಈ ಬಾರಿ ರಮೇಶ್​ ಅರವಿಂದ್​ಗೆ ನೀಡುವ ಬಗ್ಗೆ ಘೋಷಣೆ ಮಾಡಿದೆ.

ರಮೇಶ್ ಅರವಿಂದ್ (Ramesh Aravind) ಅವರು ನಟನಾಗಿ, ನಿರ್ದೇಶಕನಾಗಿ, ಬರಹಗಾರನಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಚಿತ್ರರಂಗದಲ್ಲಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಹಲವು ಚಿತ್ರಗಳು ಈಗಲೂ ಗಮನ ಸೆಳೆಯುವಂತಿವೆ. ಸಮಾಜಕ್ಕೆ ಅವರ ಕೊಡಗೆಯನ್ನು ಪರಿಗಣಿಸಿ ಈ ಸಾಲಿನ ‘ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ’ಯನ್ನು ಅವರಿಗೆ ನೀಡಲು ನಿರ್ಧರಿಸಲಾಗಿದೆ.

ಕೋಟತಟ್ಟು ಗ್ರಾಮ ಪಂಚಾಯಿತಿ ಮತ್ತು ಕೋಟ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ಈ ಬಾರಿ ರಮೇಶ್​ ಅರವಿಂದ್​ಗೆ ನೀಡುವ ಬಗ್ಗೆ ಘೋಷಣೆ ಮಾಡಿದೆ. ಕಳೆದ 17 ವರ್ಷಗಳಿಂದ ಸಮಾಜದ ವಿವಿಧ ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ. ಈ ಬಾರಿ ರಮೇಶ್ ಅರವಿಂದ್​ಗೆ ಸಿಕ್ಕಿರುವುದು ಅನೇಕರ ಖುಷಿಗೆ ಕಾರಣವಾಗಿದೆ. ರಮೇಶ್ ಅರವಿಂದ್ ಫ್ಯಾನ್ಸ್ ಈ ಬಗ್ಗೆ ಸಂತಸ ಹೊರಹಾಕಿದ್ದಾರೆ.

ನಟನಾಗಿ ಹಲವು ಸಿನಿಮಾಗಳಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ಇನ್ನು, ಹಲವು ಚಿತ್ರಗಳನ್ನು ನಿರ್ದೇಶನ ಮಾಡಿಯೂ ಭೇಷ್​ ಎನಿಸಿಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿ ಆಗಿಯೂ ರಮೇಶ್ ಅರವಿಂದ್ ಗುರುತಿಸಿಕೊಂಡಿದ್ದಾರೆ. ಅಕ್ಟೋಬರ್ 10ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಸಾಹಿತ್ಯ ಲೋಕಕ್ಕೆ ಶಿವರಾಮ ಕಾರಂತರ ಕೊಡುಗೆ ತುಂಬಾ ದೊಡ್ಡದು. ಹಲವು ದಶಕಗಳ ಕಾಲ ಸಾಹಿತ್ಯ ಲೋಕದಲ್ಲಿ ಅವರು ಶ್ರಮಿಸಿದ್ದಾರೆ. ಹಲವು ಪ್ರಶಸ್ತಿಗಳು ಶಿವರಾಮ ಕಾರಂತರಿಗೆ ಸಿಕ್ಕಿದೆ. ಅಕ್ಟೋಬರ್ 10 ಅವರ ಜನ್ಮದಿನ. ಈ ವಿಶೇಷ ದಿನದಂದೇ ಈ ಪ್ರಶಸ್ತಿ ಪ್ರದಾನ ಕಾರ್ಯ ನಡೆಯಲಿದೆ.

No Comments

Leave A Comment