Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ಪೂಜೆ

ಮೈಸೂರು: ನಾಡಹಬ್ಬ ದಸರಾಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಜ್ಜಾಗಿದ್ದು ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಬುಡಕಟ್ಟು ಜನಾಂಗದ ದೇಶದ ಪ್ರಪ್ರಥಮ ಪ್ರಜೆ ಮಹಿಳೆಯಾಗಿರುವ ರಾಷ್ಟ್ರಪತಿಗಳು ಈ ಬಾರಿ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ.

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳು ಸರಳವಾಗಿ ಸಾಂಪ್ರದಾಯಿಕವಾಗಿ ಆಚರಿಸಿದ್ದ ಮೈಸೂರು ದಸರಾದ ವೈಭವ ಹಿಂದಿನದಕ್ಕೆ ಮರಳಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿಗಳು ಚಾಲನೆ ನೀಡಲಿದ್ದಾರೆ.

ಮೈಸೂರಿನ ಮಡಕಳ್ಳಿ ಏರ್ ಪೋರ್ಟ್ ನಲ್ಲಿ ಬಂದಿಳಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮೊದಲಾದವರು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ರಾಷ್ಟ್ರಪತಿಗಳು ರಾಜ್ಯದ ನಾಯಕರು, ಗಣ್ಯರೊಂದಿಗೆ ಈಗಾಗಲೇ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

LIVE Updates
10:17 Sep 26

ಮೈಸೂರು: ನಾಡದೇವತೆ ಚಾಮುಂಡೇಶ್ವರಿಗೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿ ನಮಿಸುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ಅದ್ದೂರಿ ಚಾಲನೆ ಸೋಮವಾರ ಸಿಕ್ಕಿದೆ. ವೃಶ್ಚಿಕ ಲಗ್ನದಲ್ಲಿ ಬೆಳಗ್ಗೆ 10.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಇತರ ಗಣ್ಯರು ಚಾಲನೆ ನೀಡಿದರು.

10:17 Sep 26
ದೇಶದ ರಾಷ್ಟ್ರಪತಿಗಳು ದಸರಾಕ್ಕೆ ಚಾಲನೆ ನೀಡುತ್ತಿರುವುದು ಇದೇ ಮೊದಲು. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಸುನಿಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದಾರೆ.

ಈ ಮೂಲಕ ಎರಡು ವರ್ಷಗಳ ಕೋವಿಡ್ ಸಾಂಕ್ರಾಮಿತ ನಂತರ ಅದ್ದೂರಿ ಮೈಸೂರು ದಸರಾಕ್ಕೆ ಮುನ್ನುಡಿ ಬರೆದಾಗಿದೆ. ಮೈಸೂರು ದಸರಾ ಎಂದರೆ ಅದನ್ನು ನೋಡಲು ಕಣ್ಣುಗಳೆರಡು ಸಾಲದು, ವರ್ಣಿಸಲು ಪದಗಳು ಸಾಲದು ಎಂದು ಪ್ರತಿವರ್ಷ ಜರಗುತ್ತದೆ.
ದೇಶದ ರಾಷ್ಟ್ರಪತಿಗಳು ದಸರಾಕ್ಕೆ ಚಾಲನೆ ನೀಡುತ್ತಿರುವುದು ಇದೇ ಮೊದಲು. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಸುನಿಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದಾರೆ.

10:02 Sep 26
ನಾಡಹಬ್ಬ ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಡ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

10:01 Sep 26
ಮೈಸೂರು ದಸರಾ ಉದ್ಘಾಟನೆಗೆ ವೇದಿಕೆ ಸಿದ್ಧವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ರಾಜ್ಯದ ಗಣ್ಯರು ವೇದಿಕೆಯತ್ತ ಆಗಮಿಸಲಿದ್ದಾರೆ.

09:51 Sep 26
Live ಮೈಸೂರಿನ ನಾಡದೇವತೆ ಚಾಮುಂಡಿ ದೇವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಸಂಪುಟ ಸಚಿವರು, ರಾಜಕೀಯ ನಾ.ಯಕರು, ಗಣ್ಯರಿಂದ ಪೂಜೆ ಸಲ್ಲಿಕೆ, ಕೆಲವೇ ಕ್ಷಣಗಳಲ್ಲಿ ದಸರಾ 2022 ಉದ್ಘಾಟನೆ, ಬುಡಕಟ್ಟು ಜನಾಂಗದವರಿಂದ ರಾಷ್ಟ್ರಪತಿ ಮುರ್ಮು ಅವರಿಗೆ ವಿಶೇಷ ಗೌರವ.

No Comments

Leave A Comment