Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಸೂಪರ್ ಸ್ಟಾರ್‌’ ಕುಟುಂಬಕ್ಕೆ ಮತ್ತೊಂದು ಆಘಾತ: ಪ್ರಿನ್ಸ್ ಮಹೇಶ್ ಬಾಬು ತಾಯಿ ಇಂದಿರಾ ದೇವಿ ವಿಧಿವಶ

ತೆಲುಗು ನಟ ‘ಪ್ರಿನ್ಸ್‌’ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.

ವೆಂಟಿಲೇಟರ್‌ನಲ್ಲಿರಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮುಂಜಾನೆ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಇಂದಿರಾ ದೇವಿ ನಿಧನಕ್ಕೆ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದೆ.   ಇಂದಿರಾ ದೇವಿ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ನಡೆಯಲಿದೆ.

ಇಂದಿರಾದೇವಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಯ ನಂತರ ಇಂದಿರಾ ದೇವಿ ಅವರ ಪಾರ್ಥಿವ ಶರೀರವನ್ನು ಪದ್ಮಾಲಯ ಸ್ಟುಡಿಯೋದಲ್ಲಿ ಇರಿಸಲಾಗುವುದು ಎಂದು ಮಹೇಶ್ ಬಾಬು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಅಭಿಮಾನಿಗಳು ಪದ್ಮಾಲಯ ಸ್ಟುಡಿಯೋಗೆ ಆಗಮಿಸಿ ಇಂದಿರಮ್ಮ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಸಂಜೆ ಮಹಾಪ್ರಸ್ಥಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಮ್ಮ ಅವರ ನಿಧನಕ್ಕೆ ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ.

No Comments

Leave A Comment