Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಮಂಗಳೂರು: ಪಿಎಫ್ ಐ, ಸಿಎಫ್ ಐ ಸಂಘಟನೆಯ 12 ಕಚೇರಿಗಳಿಗೆ ಬೀಗ ಜಡಿದ ಪೊಲೀಸರು

ಮಂಗಳೂರು: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವುದರೊಂದಿಗೆ ಮಂಗಳೂರು ಒಂದರಲ್ಲಿಯೇ ಅದರ 12 ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.

ಬುಧವಾರ ಸಂಜೆಯಿಂದ ಪಿಎಫ್ ಐ ಸಂಘಟನೆಯ 10 ಕಚೇರಿಗಳು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ ಐ) ಮತ್ತು ಸಂಘಟನೆಯ ಮಾಹಿತಿ ಅಂಡ್ ಎಂಪವರ್ಮೆಂಟ್ ಕಚೇರಿಗಳನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ‌.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್‌ಐ ಹಾಗೂ ನಗರದ   ರಾವ್ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment