Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ

ಉಡುಪಿ:ರಾಷ್ಟ್ರೀಯ ಹೆದ್ದಾರಿ 169A ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಹಿನ್ನೆಲೆ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಅಕ್ಟೋಬರ್ 1 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಕ್ಟೋಬರ್ 1 ರಿಂದ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ)(2) & (5) ರನ್ವಯ , ರಾಷ್ಟ್ರೀಯ ಹೆದ್ದಾರಿ 169A ಕಿ.ಮೀ 76.040 ರಿಂದ ಕಿ.ಮೀ 85.200ರ ಇಂದ್ರಾಳಿ ರೇಲ್ವೆ ಸೇತುವ ಮೂಲಕ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶ ನೀದಲಾಗಿದೆ.

1. ಕುಂದಾಪುರ ಕಡೆಯಿಂದ ಬರುವ ಘನವಾಹನಗಳು ಅಂಬಾಗಿಲು-ಪೆರಂಪಳ್ಳಿ-ಮಣಿಪಾಲ ರಸ್ತೆಯ ಮೂಲಕ ಚಲಿಸುವುದು.

2. ಉಡುಪಿಯಿಂದ ಬರುವ ಘನವಾಹನಗಳು ಕಲ್ಲಂಕ ಜಂಕ್ಷನ್ ಬಳಿ ಎಡ ತಿರುವು ಪಡೆದು ಗುಂಡಿಬೈಲಿ ರಸ್ತೆ ಮೂಲಕ ಎ.ವಿ ಬಾಳಿಗ ಆಸ್ಪತ್ರೆ ಬಳಿಯಿಂದ ಪೆರಂಪಳ್ಳಿ ರಸ್ತೆಯ ಮೂಲಕ ಮಣಿಪಾಲಕ್ಕೆ ಚಲಿಸುವುದು.

3, ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ-ಪರಂಪಳ್ಳಿ-ಅಂಬಾಗಿಲು ರಸ್ತೆಯ ಮೂಲಕ ಚಲಿಸುವುದು.

4. ಉಡುಪಿಯಿಂದ ಮಣಿಪಾಲಕ್ಕೆ ಚಲಿಸುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸುವುದು.

No Comments

Leave A Comment