Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಬಾಗಲಕೋಟೆ: ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಸೀರೆ, ಕುಪ್ಪಸ, ಹಣ್ಣು, ಹೂವು ಕಾಯಿ ಸೇರಿ ನಾನಾ ಪೂಜೆ ಹಾಗೂ ಉಡಿ ತುಂಬುವ ಸಾಮಗ್ರಿಯುಳ್ಳ ಬಾಗಿನವನ್ನು ಕೃಷ್ಣೆಯ ಮಡಲಿಗೆ ಮುಖ್ಯಮಂತ್ರಿಗಳು ಸಮರ್ಪಿಸಿದರು.

ಇಂದು ಬೆಳಗ್ಗೆ 10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿಗಳು ನೇರವಾಗಿ ಜಲಾಶಯಕ್ಕೆ ತೆರಳಿ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

No Comments

Leave A Comment