Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್​ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್​ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್​ಬಾಲ್ ಕ್ಲಬ್ ಆಗಿರುವ ‘ಬಿಆರ್​ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್​ಐ ಲಿಗಾ-1 ತಂಡವು ಪೆರ್​ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್​ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

No Comments

Leave A Comment