ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಗುರುಗ್ರಾಮ್ ಆಸ್ಪತ್ರೆಗೆ ದಾಖಲು
ಗುರುಗ್ರಾಮ್: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ “ಗಂಭೀರ”ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಧ್ಯಮ ವರದಿಗಳ ಪ್ರಕಾರ, ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಐಸಿಯು ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಯಾದವ್ ಅವರು ಕೆಲವು ತಿಂಗಳುಗಳಿಂದ ಹಲವಾರು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಸ್ಥಿತಿ ಇಂದು ಗಂಭೀರವಾಗಿದೆ ಎಂದು ವಿವರಿಸಲಾಗಿದೆ.
ಎಸ್‌ಪಿ ವರಿಷ್ಠರ ಪುತ್ರ ಅಖಿಲೇಶ್ ಯಾದವ್ ಅವರು ತಮ್ಮ ತಂದೆಯ ಪಕ್ಕದಲ್ಲಿರಲು ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಶಿವಪಾಲ್ ಯಾದವ್ ಅವರು ಪ್ರಸ್ತುತ ದೆಹಲಿಯಲ್ಲಿದ್ದಾರೆ. ಇಂದು ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಲು ಗುರುಗ್ರಾಮ್‌ಗೆ ತೆರಳುವ ಸಾಧ್ಯತೆಯಿದೆ.