Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಜಗರ, ಜಂಬೂ ಸವಾರಿಗೆ ಭರದ ಸಿದ್ಧತೆ; ನಾಡಹಬ್ಬದ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.

ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸಾಂಸ್ಕೃತಿಕ ನಗರ ಮೈಸೂರು ಅಲ್ಲದೆ, ಕೊಡಗು ಜಿಲ್ಲೆಯ ಮಡಿಕೇರಿ, ಕರಾವಳಿಯ ಮಂಗಳೂರು ಹಾಗೂ ಧಾರ್ಮಿಕ ಯಾತ್ರಾಸ್ಥಳ ಶೃಂಗೇರಿಯಲ್ಲೂ ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನರು ಸಜ್ಜಾಗಿದ್ದಾರೆ. ನಗರಗಳು ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿವೆ.

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.  ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ.

ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು.

ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯು ಅ.5ರಂದು ನಡೆಯಲಿದೆ. 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ, ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ನಮಿಸಲು, ಮೆರವಣಿಗೆ ವೈಭವ ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ಈ ಬಾರಿ ದೀಪಾಲಂಕಾರದ ನಡುವೆ ಮೆರವಣಿಗೆ ಸಾಗುವುದು ವಿಶೇಷ.

ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.36ರಿಂದ 2.50ರೊಳಗೆ ನಂದಿಧ್ವಜ ಪೂಜೆ ನಡೆಯಲಿದೆ. ಸಂಜೆ 5.07ರಿಂದ 5.18ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿ ಉದ್ಘಾಟಿಸಲಿದ್ದಾರೆ.

No Comments

Leave A Comment