Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಥಾಯ್ಲೆಂಡ್‌: ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ ಗುಂಡಿನ ದಾಳಿ; 30 ಮಂದಿ ದಾರುಣ ಸಾವು

ಥಾಯ್ಲೆಂಡ್‌: ಈಶಾನ್ಯ ಪ್ರಾಂತ್ಯದಲ್ಲಿ ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ ಗುರುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 23 ಮಕ್ಕಳು ಸೇರಿದಂತೆ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ.

ಲ್ಯಾಂಫು ಪಟ್ಟಣದ ಮಧ್ಯಭಾಗದಲ್ಲಿ ಬಂದೂಕುಧಾರಿಯು ಮಧ್ಯಾಹ್ನದ ವೇಳೆಗೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಚಾಯೋನ್ ಕ್ರೈಥೋಂಗ್ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿದ್ದಾರೆ ಬಂದೂಕುಧಾರಿ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕ್ರಮ ಕೈಗೊಳ್ಳಲು ಮತ್ತು ಅಪರಾಧಿಯನ್ನು ಬಂಧಿಸಲು ಪ್ರಧಾನಿ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.  ಗುಂಡಿನ ದಾಳಿಯಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಆದರೆ ಈ ಬಗ್ಗೆ ಹೆಚ್ಚಿನ ವಿವರಗಳಿಲ್ಲ ಎಂದು ಅವರು ಹೇಳಿದರು.

ಶೂಟಿಂಗ್ ನಂತರ, ಆತ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.ನಬಿಬಿಸಿ ಪ್ರಕಾರ, ಥಾಯ್ ಪೊಲೀಸರು ಮೊದಲು ತಮ್ಮ ಫೇಸ್‌ಬುಕ್ ಪುಟದಲ್ಲಿ ಶೂಟರ್ ಅನ್ನು 34 ವರ್ಷದ ಪನ್ಯಾ ಕಾಮ್ರಾಬ್ ಎಂದು ಗುರುತಿಸಿದ್ದರು, ಘಟನೆ ಬಗ್ಗೆ ಮತ್ತಷ್ಟು ಮಾಹಿತಿಗಳು ಹೊರಬೀಳಬೇಕಿದೆ.

No Comments

Leave A Comment