ತಮಿಳುನಾಡು: ಡಿಎಂಕೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಎಂಕೆ ಸ್ಟಾಲಿನ್
ಚೆನ್ನೈ: ಭಾನುವಾರ ಇಲ್ಲಿ ನಡೆದ ಪಕ್ಷದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹೊಸದಾಗಿ ರಚನೆಯಾದ ಜನರಲ್ ಕೌನ್ಸಿಲ್ ಸಭೆಯಲ್ಲಿ ಅವರನ್ನು ಪಕ್ಷದ ಉನ್ನತ ಹುದ್ದೆಗೆ ಎರಡನೇ ಭಾರಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷ ಘೋಷಿಸಿತು.
ನಾಮಪತ್ರ ಸಲ್ಲಿಸುವ ಮುನ್ನ ಸ್ಟಾಲಿನ್ ಅವರು ತಮ್ಮ ತಂದೆ ಹಾಗೂ ಡಿಎಂಕೆ ಮಾಜಿ ಅಧ್ಯಕ್ಷ ಎಂ. ಕರುಣಾನಿಧಿ ಅವರ ಗೋಪಾಲಪುರಂ ನಿವಾಸಕ್ಕೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಮರೀನಾದಲ್ಲಿರುವ ಕರುಣಾನಿಧಿ ಮತ್ತು ಮಾಜಿ ಮುಖ್ಯಮಂತ್ರಿ ಅರಿಗ್ನಾರ್ ಅಣ್ಣಾ ಅವರ ಸ್ಮಾರಕಗಳಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಕರುಣಾನಿಧಿ ಅವರ ನಿಧನದ ನಂತರ 2018ರ ಆಗಸ್ಟ್ 28ರಂದು ಸ್ಟಾಲಿನ್ ಡಿಎಂಕೆ ಅಧ್ಯಕ್ಷರಾದರು.