Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಸುಳ್ಯ: ಕಾರಿನಲ್ಲಿ ಯುವಕನ ಶವ ಪತ್ತೆ

ಸುಳ್ಯ:ಅ.09.ಸುಳ್ಯ ಸರ್ಕಾರಿ ಆಸ್ಪತ್ರೆ ಮುಂಭಾಗ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಶವವನ್ನು ಪರೀಕ್ಷಿಸಿದಾಗ ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯನ್ನು ಪೆರಾಜೆಯ ಪೆರಂಗಜೆ ಲೋಕಯ್ಯ ಗೌಡ ಎಂಬವರ ಪುತ್ರ ಗೌರೀಶ್ (30) ಎಂದು ಗುರುತಿಸಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಗೌರೀಶ್, ಗುರುವಾರ ಸಂಜೆ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕಾರು ಪಾರ್ಕ್ ಮಾಡಿದ್ದ. ಕುಡಿತದ ಕಾರಣದಿಂದಲೇ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಮೃತದೇಹ ಬಾತುಕೊಂಡಿದ್ದು, ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆ ಸನಿಹದಲ್ಲಿದ್ದವರು ಭಾನುವಾರ ಬೆಳಗ್ಗೆ ಕಾರನ್ನು ನೋಡಿದಾಗ ಅದರಲ್ಲಿ ಶವ ಇರುವುದು ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಯಿತು.

ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಸುಳ್ಯ ಎಸ್ಸೈ ದಿಲೀಪ್, ಡಿವೈಎಸ್‌ಪಿ ಹಿರೇಮಠ ಹಾಗೂ ಸಿಬಂದಿ ಪರಿಶೀಲನೆ ನಡೆಸಿದರು. ಗೌರೀಶ್ ವಿವಾಹಿತನಾಗಿದ್ದು, ಪತ್ನಿ ಆಶ್ರಮವೊಂದಕ್ಕೆ ಸೇರಿದ್ದಾರೆನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

No Comments

Leave A Comment