ಯುವ ದಂಪತಿಯ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಫ್ಲ್ಯಾಟ್ ನಲ್ಲಿ ಪತ್ತೆ
ಮಂಗಳೂರು: ಯುವ ದಂಪತಿಗಳು ನಗರದ ಮರೋಳಿಯ ಅಪಾರ್ಟ್‌ಮೆಂಟ್ ವೊಂದರಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಕೊಪ್ಪ ಮೂಲದ ಮಲ್ಲಿಕಾರ್ಜುನ್ ಬಸವರಾಜ್ ಮತ್ತು ಸೌಮ್ಯಾ ನಾಯಕ್ ಎಂದು ಗುರುತಿಸಲಾಗಿದೆ.
ಮಲ್ಲಿಕಾರ್ಜುನ್ ಅವರು ಮೊದಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯವನ್ನು ಸೌಮ್ಯಾ ತನ್ನ ಸಂಬಂಧಿಕರಿಗೆ ತಿಳಿಸಿದ್ದಾರೆ. ಬಳಿಕ ಸಂಬಂಧಿಕರು ದಂಪತಿಯ ಮನೆಗೆ ಬರುವ ಮುನ್ನ ಸೌಮ್ಯಾ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.