Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

ನವದೆಹಲಿ, ಅ 11.: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ನೇಮಿಸಲಾಗಿದೆ.

ಈ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, ‘ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಇನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ

No Comments

Leave A Comment