Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಖ್ಯಾತ ಕಿರು ತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ದಿಯ ನಿಗೂಢ ಸಾವು

ಇಂದೋರ್: ಬಿಗ್ ಬಾಸ್ ಸ್ಪರ್ದಿ ಹಾಗೂ ಖ್ಯಾತ ಕಿರುತೆರೆ ನಟಿ ನಿಗೂಢವಾಗಿ ಮೃತಪಟ್ಟಿದ್ದು, ಇಂದೋರ್ ನಲ್ಲಿ ಇರುವ ನಟಿಯ ಮನೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತಪಟ್ಟಿರುವ ನಟಿಯನ್ನು ವೈಶಾಲಿ ಟಕ್ಕರ್ ಎಂದು ಗುರುತಿಸಲಾಗಿದೆ.

ವೈಶಾಲಿ ಟಕ್ಕರ್ ಇವರು ಹಿಂದಿಯ ಜನಪ್ರಿಯ ಧಾರಾವಾಹಿ ಯೇ ರಿಶ್ತಾ ಕ್ಯಾ ಕೆಹತಾ ಹೈ, ನಸುರಲ್ ಸಿಮರಕಾ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋದಲ್ಲಿ ಕೂಡಾ ಕಾಣಿಸಿಕೊಂಡಿದ್ದರು.

ವೈಶಾಲಿ ಟಕ್ಕರ್ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಆದರೂ ಹಲವು ಸಂಶಯಗಳಿಗೆ ಕಾರಣವಾಗಿದೆ. ಇದೀಗ ಇವರು ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಹಿನ್ನೆಲೆ ಇದೀಗ ಮಧ್ಯಪ್ರದೇಶದ ತೇಜಾಜಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment