Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ

ಮಣಿಪಾಲ: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೆರಂಪಳ್ಳಿ ಸುಂದರಿ ಗೇಟ್‌ ಬಳಿ ಅ.17ರ ಸೋಮವಾರ ತಡರಾತ್ರಿ ನಡೆದಿದೆ.

ಕಾರು ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ 2-3 ಪಲ್ಟಿಯಾಗಿ ಮತ್ತೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತ ನಡೆದ ಪ್ರದೇಶ ತಿರುವಿನಿಂದ ಕೂಡಿದ್ದು, ತಿರುವು ಸರಿಪಡಿಸಲು ಆಗ್ರಹಿಸಿದ್ದರೂ ಈವರೆಗೆ ಸರಿಪಡಿಸುವ ಕೆಲಸಕ್ಕೆ ಯಾರೂ ಕೈ ಹಾಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

No Comments

Leave A Comment