Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪಿಗಳ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸೋಮವಾರ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪರ್ಲಿಯಾ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್ ಹಾಗೂ ಅಹಮ್ಮದ್ ಸೈಫ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಗಾಂಜಾ ಸೇವನೆ ಮಾಡುತ್ತಿದ್ದರಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿ ಅಶಾಂತಿ ಹಬ್ಬಿದ ಹಿನ್ನೆಲೆಯಲ್ಲಿ ಸ್ಥಳೀಯರು ಪೋಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.

No Comments

Leave A Comment