Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕರಾವಳಿ ಭಾಗದ ದೈವ ನರ್ತಕರಿಗೆ ಸರ್ಕಾರದಿಂದ 2 ಸಾವಿರ ರೂ. ಮಾಸಾಶನ: ಸಚಿವ ಸುನಿಲ್ ಕುಮಾರ್

ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ.

ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಿನಿಮಾವನ್ನು ನೋಡಿದ ಅನೇಕರು ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಒಳ್ಳೆಯ ಯೋಜನೆಗಳನ್ನು ತರಬೇಕು, ಅವರಿಗಾಗಿ ಮಾಸಾಶನ  ನೀಡಬೇಕು ಎಂದು ಹೇಳುತ್ತಿದ್ದರು.

ಸಂಸ್ಕೃತಿ‌ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿಕೆ ನಟ ಚೇತನ್ ಅಹಿಂಸ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ನಟ ಚೇತನ್ ವಿರುದ್ಧ ಪೊಲೀಸ್ ದೂರು
ಭೂತಕೋಲ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದಿದ್ದ ನಟ ಚೇತನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ದೂರು ದಾಖಲಿಸಿದೆ. ನಟ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹ ವ್ಯಕ್ತಪಡಿಸಿದೆ.

ಕಾಂತಾರ ಸಿನಿಮಾ ಕರ್ನಾಟಕ ಗಡಿಯನ್ನು ದಾಟಿ ಹೊರರಾಜ್ಯ, ಹೊರದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.

No Comments

Leave A Comment