Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್​ ರದ್ದು

ನವದೆಹಲಿ: ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​  ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ. ಜುಲೈ 2020ರಲ್ಲಿ ಕೇಂದ್ರ ಗೃಹ ಇಲಾಖೆಯು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು.

ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸೆನ್ಸ್ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆ. ಲೈಸೆನ್ಸ್​ ರದ್ದತಿ ಕುರಿತ ಮಾಹಿತಿಯನ್ನು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಿಕೊಡಲಾಗಿದೆ.

ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಟ್ರಸ್ಟ್​ನ ವಿಶ್ವಸ್ಥರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದಾರೆ.

No Comments

Leave A Comment