Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ವಿಧಿವಶ

ಬೆಂಗಳೂರು: ಅನಾರೋಗ್ಯಕ್ಕೀಡಾಗಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

73 ವರ್ಷದ ಜಾನ್ ಶಾ ಅವರು ಅನಾರೋಗ್ಯಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಜಾನ್ ಶಾ ವಿಧಿವಶರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಜಾನ್ ಶಾ ಅವರು ಬೆಂಗಳೂರು ಮೂಲದ ಬಯೋಕಾನ್ ಲಿಮಿಟೆಡ್​ನ ಮಾಜಿ ಉಪಾಧ್ಯಕ್ಷರಾಗಿದ್ದರು. ಮಧುರಾ ಕೋಟ್ಸ್ ಲಿಮಿಟೆಡ್​ನ ಅಧ್ಯಕ್ಷ ಹಾಗೂ ಕೋಟ್ಸ್ ವಿಯೆಲ್ಲಾ ಗ್ರೂಪ್​ನ ಎಂಡಿ ಆಗಿ ಕಾರ್ಯನಿರ್ವಹಿಸಿದ್ದರು.

ಜಾನ್ ಶಾ ಅವರು ಬ್ರಿಟನ್​ನ ಗ್ಲಾಸ್ಗೋ ವಿಶ್ವವಿದ್ಯಾಲಯದಿಂದ ಇತಿಹಾಸ, ರಾಜಕೀಯಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದರು.

No Comments

Leave A Comment