Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲಿಯೇ 5 ಮಂದಿ ಸಾವು, ಐವರಿಗೆ ಗಾಯ

ಪ್ರಯಾಗ್ ರಾಜ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಪ್ರಯಾಗ್ ರಾಜ್ ದ ವಿಂದ್ಯಾಚಲ ಎಂಬಲ್ಲಿ ಹಂಡಿಯಾ ಹೆದ್ದಾರಿ ಪಕ್ಕ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಇನ್ನು 5 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಮೃತಪಟ್ಟವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸಾಧ್ಯವಾದ ಸಹಾಯವನ್ನೆಲ್ಲಾ ಮಾಡುತ್ತಿದ್ದಾರೆ ಎಂದು ಗಂಗಾಪರ್ ನ ಹೆಚ್ಚುವರಿ ಎಸ್ಪಿ ಎ ಅಗರ್ವಾಲ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

No Comments

Leave A Comment