Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಅದ್ಧೂರಿಯಾಗಿ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವ: ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್

ಹಾಸನ: ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.

ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಕ್ಲೋಸ್ ಆಗಲಿದೆ.

ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನೋತ್ಸವದ ಜೊತೆಗೇ ನಡೆಯುವ ಸಿದ್ದೇಶ್ವರ ಜಾತ್ರೋ ಮಹೋತ್ಸವ ಹಾಗೂ ಕೆಂಡೋತ್ಸವ ಜರುಗಿದೆ. ಮಧ್ಯ ರಾತ್ರಿ ಸಹಸ್ರಾರು ಭಕ್ತರು, ಮಂಗಳವಾದ್ಯ, ನಂದಿಕೋಲು ಕುಣಿತದ ಜೊತೆಗೆ ಹಾಸನಾಂಬೆ ದೇಗುಲದ ಆವರಣದಲ್ಲಿ ನಡೆದ ರಥೋತ್ಸವ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಕಳೆದ ಹದಿನೈದು ದಿನಗಳಿಂದ ಹಾಸನದ ಅಧಿ ದೇವತೆ ಹಾಸನಾಂಬೆ ದರ್ಶಣೋತ್ಸವ ಹಾಗು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಅ.26ರ ಮಧ್ಯ ರಾತ್ರಿ 12 ಗಂಟೆಗೆ ಸಿದ್ದೇಶ್ವರ ತೇರನ್ನೆಳೆದು ಭಕ್ತರು ಸಂಭ್ರಮಿಸಿದರು. ಕಳೆದ 15 ದಿನಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಾಸನಾಂಬೆ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

No Comments

Leave A Comment