Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಪುರುಷ-ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ: ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು- ನಟಿ ರಮ್ಯಾ

ಬೆಂಗಳೂರು: ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕ ನೀಡುವುದಾಗಿ ಘೋಷಿಸಿದೆ.

ಬಿಸಿಸಿಐನ ಈ ನಿರ್ಧಾರವನ್ನು ಶ್ಲಾಘಿಸಿದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು, ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.

ತುಂಬಾ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾರವಾಗಿದೆ. ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರನ್ನು ಟ್ಯಾಗ್ ಮಾಡಿ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.

No Comments

Leave A Comment