Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು, ಹಾಸ್ಟೆಲ್ ವಾರ್ಡನ್ ಹಾಗೂ ಮತ್ತೋರ್ವರ ವಿರುದ್ಧ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಧೀಶರ ಮುಂದೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೆರವಿನೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರು ಮೈಸೂರಿನಲ್ಲಿ ದೂರು ದಾಖಲಿಸಿದ ನಂತರ ಪೋಕ್ಸೊ ಕಾಯ್ದೆ ಮತ್ತು ಅತ್ಯಾಚಾರ ಆರೋಪದಲ್ಲಿ ಮುರುಘಾ ಮಠಾಧೀಶರಾಗಿದ್ದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸೆಪ್ಚೆಂಬರ್ 1 ರಂದು ಬಂಧಿಸಿದರು.

ಆಶ್ರಮದ ಹಾಸ್ಟೆಲ್ ನಲ್ಲಿದ್ದ ಬಾಲಕಿಯರು, ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿಕೆ ನೀಡಿದ್ದರು. ಇಲ್ಲಿಯವರೆಗೂ ಸ್ವಾಮೀಜಿ ವಿರುದ್ಧ ಮೂರು ಎಫ್ ಐ ಆರ್ ದಾಖಲಾಗಿದೆ. ಮೂರನೇ ಎಫ್ ಐಆರ್ ನಲ್ಲಿ ಸ್ವಾಮೀಜಿ, ಹಾಸ್ಟೆಲ್ ವಾರ್ಡನ್ ಸೇರಿದಂತೆ ಆರು ಮಂದಿಯನ್ನು ಆರೋಪಿಗಳನ್ನಾಗಿಸಲಾಗಿದೆ.

No Comments

Leave A Comment