Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮತ್ತೊಂದು ಅವಧಿಗೆ ಹೆಚ್ ಡಿ ದೇವೇಗೌಡ ಪುನರಾಯ್ಕೆ

ಬೆಂಗಳೂರು: ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶುಕ್ರವಾರ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಜೆಡಿಎಸ್ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

89 ವರ್ಷ ವಯಸ್ಸಿನ ಹಿರಿಯ ನಾಯಕ 1999 ರಲ್ಲಿ ಪಕ್ಷ ಪ್ರಾರಂಭವಾದಾಗಿನಿಂದ ದಾಖಲೆಯ 23 ವರ್ಷಗಳ ಕಾಲ ಜೆಡಿಎಸ್ ವರಿಷ್ಠರಾಗಿದ್ದಾರೆ. 13 ರಾಜ್ಯಗಳ ಪ್ರತಿನಿಧಿಗಳು ಗೌಡರು ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಉಳಿಯಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆ,  2024 ರ ಸಾರ್ವತ್ರಿಕ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿರುವುದರಿಂದ ಜೆಡಿಎಸ್ ಈ ಮಹತ್ವದ ನಿರ್ಣಯ ಕೈಗೊಂಡಿದೆ.

ರೈತರು, ದಲಿತರು, ಯುವಕರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಪಕ್ಷದ ಜಾತ್ಯತೀತ ಸಿದ್ದಾಂತಕ್ಕೆ ಅನುಗುಣವಾಗಿ ಕಾರ್ಯಕಾರಿಣಿ ಸೂಕ್ತವಾದ ನಿರ್ಣಯಗಳನ್ನು ಅಂಗೀಕರಿಸಿತು. ಕೋಮು ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದಂತೆ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಜೆಡಿಎಸ್ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment