Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

‘ಕೋಟಿ ಕಂಠ ಗಾಯನ’ಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ನಾಡಿನಾದ್ಯಂತ ಪಸರಿಸಿದ ಕನ್ನಡದ ಕಂಪು

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವುದರೊಂದಿಗೆ ನಾಡಿನಾದ್ಯಂತ ಕನ್ನಡದ ಕಂಪು ಪಸರಿಸಿತು. ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯಮಂತ್ರಿ, ಕನ್ನಡದ ಆಯ್ದ ಗೀತೆಗಳಿಗೆ ಧ್ವನಿಗೂಡಿಸಿದರು.

 ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನ ಹಾಡಿ ಗಾಯಕರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಕನ್ನಡ ಗೀತೆ ಹಾಡುವ ಮೂಲಕ ಒಗ್ಗಟ್ಟನ್ನು ತೋರಿಸಿದ್ದಾರೆ. ನಾವೆಲ್ಲ ಕನ್ನಡಕ್ಕಾಗಿ ಒಗ್ಗಟ್ಟಾಗಿದ್ದೇವೆ ಎಂಬುದನ್ನು ತೋರಿಸಿದ್ದಾರೆ. ನ.1ರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೇವೆ. ನ.1ರಂದು ಪುನೀತ್​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತೆ. ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ. ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್‌ಕುಮಾರ್. ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್‌ ಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಭಾಗಿಯಾಗ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್‌ಕುಮಾರ್ ಕುಟುಂಬದವರು ಭಾಗಿಯಾಗ್ತಾರೆ ಎಂದು ಅವರು ತಿಳಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧಾರವಾಡದ ಕಿಮ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ಕನ್ನಡದ ಆಯ್ದ ಗೀತೆಗಳನ್ನು ಹಾಡಲಾಯಿತು.

No Comments

Leave A Comment