ಕುಂದಾಪುರ, ಅ 28 . ತಲ್ಲೂರಿನಲ್ಲಿ ಅಕ್ಟೋಬರ್ 27ರಂದು 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಭಾರತಿ ಅವರ ಪುತ್ರಿ ಅನುಶ್ರೀ ಮನೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪಿದ್ದಾಳೆ.
ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಅವರ ಮರಣೋತ್ತರ ಪರೀಕ್ಷೆ ಕೂಡ ನಡೆಸಲಾಗಿದ್ದು, ವರದಿಯ ಬಳೀಕ ಸಾವಿಗೆ ನಿಖರ ಕಾರಣ ತಿಳಿಯಬಹುದು.
ಅನುಶ್ರೀ ಹಟ್ಟಿಅಂಗಡಿ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದರು.
ಇನ್ನು ಅನುಶ್ರೀ ಅವರ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿ ಅವರ ತಾಯಿಯ ಮನೆಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.
ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮಾಜಿ ಶಾಸಕ ಗೋಪಾಲ ಪೂಜಾರಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.