Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!

ನವದೆಹಲಿ: ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಜನರು ವಾಟ್ಸಪ್  ನಂಬರ್ 6357000360 ಮೂಲಕ ತಮ್ಮ ಅಭಿಪ್ರಾಯವನ್ನು ದಾಖಲಿಸಬಹುದಾಗಿದೆ ಅಲ್ಲದೇ ವೈಸ್ ಮೇಸೆಜ್ ಕೂಡಾ ಮಾಡಬಹುದಾಗಿದೆ. ನವೆಂಬರ್ 3ರವರೆಗೂ ವಾಟ್ಸಾಪ್ ಮತ್ತು ಎಸ್ ಎಂಎಸ್ ಕಳುಹಿಸಬಹುದಾಗಿದೆ. ನವೆಂಬರ್ 4ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ. ಕೇಜ್ರಿವಾಲ್ ಇ-ಮೇಲ್ ಐಡಿಯೊಂದನ್ನು ಹಂಚಿಕೊಂಡಿದ್ದು, ಅದರ ಮೂಲಕವೂ ಸಂದೇಶ ಕಳುಹಿಸಲು ಅವಕಾಶವಿದೆ.

ಪಂಜಾಬ್ ನಲ್ಲಿಯೂ ಇದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸಿ, ಭಗವಂತ್ ಮಾನ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಭೇರಿ ಬಾರಿಸಿತ್ತು, ಮಾನ್ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದರು. 182 ಸದಸ್ಯ ಬಲದ ಗುಜರಾತ್ ವಿಧಾನಸಭಾ ಚುನಾವಣೆ ಈ ವರ್ಷಾಂತ್ಯದೊಳಗೆ ನಡೆಯಲಿದೆ. ಆದಾಗ್ಯೂ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪ್ರಕಟಿಸಿಲ್ಲ.

No Comments

Leave A Comment