Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ

ಚಿತ್ರದುರ್ಗ: ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ಕೊನೆಗೂ ಶನಿವಾರ ಬಂಧಿಸಿದ್ದಾರೆ.

ಪರಮಶಿವಯ್ಯ ಅವರನ್ನು ಇಂದು ಬಂಧಿಸಲಾಗಿದ್ದು, ತನಿಖಾ ತಂಡ ಡಿವೈಎಸ್ ಪಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ನಡೆಸಿತು. ಬಳಿಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿತು.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸಿದ್ದಾರೆ. ನಿನ್ನೆಯಷ್ಟೇ ಮುರುಘಾ ಶ್ರೀಗಳ ವಿರುದ್ಧ 694 ಪುಟಗಳ ಆರೋಪಪಟ್ಟಿಯನ್ನುಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

No Comments

Leave A Comment