Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಬೆಂಗಳೂರಿಗರಿಗೆ ತಪ್ಪದ ಕಾಟ; ನವೆಂಬರ್‌ನಲ್ಲಿ ಮತ್ತೆ ಶುರುವಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಬಿಡುವು ಕೊಟ್ಟಿರುವ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ನವೆಂಬರ್ 2 ರಿಂದ ನವೆಂಬರ್ 4 ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಶನಿವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಹಿತಕರ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ನವೆಂಬರ್‌ 2 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

No Comments

Leave A Comment