ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣ : ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ
ರಾಮನಗರ, ಅ 31 : ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಎ 1 ಆರೋಪಿ ಮಾಗಡಿ ತಾಲ್ಲೂಕಿನ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಹಾಗೂ ಎ 2 ಆರೋಪಿ ಯುವತಿ ನೀಲಾಂಬಿಕೆ ಹಾಗೂ ಎ3 ಆರೋಪಿಯಾಗಿರುವ ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ ಹೆಚ್ಚಿನ ವಿಚಾರಣೆಗಾಗಿ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1 ನೇ ಜೆಎಂಸಿ ಕೋರ್ಟ್ ನ್ಯಾಯಮೂರ್ತಿ ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧ ಇತ್ತೀಚೆಗೆ ನ್ಯಾಯಾಲಯ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಸಹೋದರ ಸಂಬಂಧಿಯಾಗಿದ್ದಂತ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಯ ಹನಿಟ್ರ್ಯಾಪ್ ಕೈವಾಡ ಬೆಳಕಿಗೆ ಬಂದಿತ್ತು