Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

2022: ಕರ್ನಾಟಕದಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ, ಸಜ್ಜನ್ ಜಿಂದಾಲ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್​ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ (Sajjan Jindal) ಬುಧವಾರ ಘೋಷಿಸಿದ್ದಾರೆ. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka 2022) ಅವರು ಈ ಘೋಷಣೆ ಮಾಡಿದರು. ಕರ್ನಾಟಕದಲ್ಲಿ ಹೂಡಿಕೆಗೆ ಅನೇಕ ಉದ್ಯಮಿಗಳು ಆಸಕ್ತಿ ತೋರಿದ್ದಾರೆ.

ಇದರ ಬೆನ್ನಲ್ಲೇ, ರಾಜ್ಯದಲ್ಲಿ ನಾವು 50 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತೇವೆ ಎಂದು ಸ್ಟರ್ಲೈಟ್ ಪವರ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಪ್ರತೀಕ್ ಅಗರ್ವಾಲ್ ಘೋಷಿಸಿದ್ದಾರೆ. ಇಂಧನ ಕ್ಷೇತ್ರ ಹಾಗೂ ಹಸಿರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

1 ಲಕ್ಷ ಕೋಟಿ ರೂ. ಹೂಡಿಕೆ: ಅದಾನಿ ಗ್ರೂಪ್

ಕರ್ನಾಟಕದಲ್ಲಿ ಮುಂದಿನ 7 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಸಿಇಒ ಕರಣ್ ಅದಾನಿ ಘೋಷಣೆ ಮಾಡಿದ್ದಾರೆ. ಮಲ್ಟಿಪಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿ, ಆಹಾರ ಸಂಸ್ಕರಣೆ, ಇಂಧನ, ನವೀಕರಿಸಬಹುದಾದ ಇಂಧನ, ಸೌರ ಶಕ್ತಿ, ಜಲಸಾರಿಗೆ ಹಾಗೂ ಲಾಜಿಸ್ಟಿಕ್ ಕ್ಷೇತ್ರದಲ್ಲೂ ಹೂಡಿಕೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Invest Karnataka 2022: ಹೂಡಿಕೆದಾರರಿಗೆ ರೆಡ್ ಕಾರ್ಪೆಟ್ ಹಾಸಿದ್ದೇವೆ; ಪ್ರಧಾನಿ ಮೋದಿ

ಮೂರು ದಿನಗಳ ಕಾಲ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು. ಸಮಾವೇಶದಲ್ಲಿ ಭಾಗಿಯಾದ ವಿಶ್ವದ ಎಲ್ಲ ಮೂಲೆ ಮೂಲೆಗಳಿಂದ ಬಂದಿರುವ ಹೂಡಿಕೆದಾರರಿಗೂ ಆತ್ಮೀಯ ಸ್ವಾಗತ ಎಂದಿದ್ದ ಮೋದಿ, ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವಂತೆ ಉದ್ಯಮಿಗಳಲ್ಲಿ ಮನವಿ ಮಾಡಿದ್ದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದಾಗಿ 7 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ. ಖಾಸಗಿ ವಲಯದಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶದ ಪೂರ್ವಭಾವಿ ಹೇಳಿಕೆಯಲ್ಲಿ ತಿಳಿಸಿದ್ದರು. ಕೋವಿಡ್ ನಂತರ ರಾಜ್ಯದ ಆರ್ಥಿಕತೆ ಸಾಕಷ್ಟು ಸುಧಾರಿಸಿದೆ ಎಂದು ಅವರು ಹೇಳಿದ್ದರು.

No Comments

Leave A Comment