Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ತಂಡ(NIA)ದ ದಾಳಿ ಮುಂದುವರಿದಿದೆ. ನಿಷೇಧಿತ ಪಿಎಫ್ ಐ ಮುಖಂಡರ ಮನೆ(PFI leaders) ಮೇಲೆ ದಾಳಿ ನಡೆದಿದೆ.

ನಿಷೇಧಿತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ PFI ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ನಿಷೇಧಿತ ಪಿಎಫ್​ಐ ಮುಖಂಡರಿಗಾಗಿ ಎನ್​ಐಎ ತಲಾಶ್ ನಡೆಸುತ್ತಿದೆ.

ಬೆಳ್ಳಾರೆಯಲ್ಲಿ ಎಸ್ ಡಿಪಿಐ ಕಾರ್ಯದರ್ಶಿ ಬಂಧನ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಎನ್ಐಎ ಇಂದು ಬೆಳ್ಳಂಬೆಳಗ್ಗೆ ಬೆಳ್ಳಾರೆಯಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್​ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬಂಧಿಸಿದ್ದಾರೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಶೋಧ ಕಾರ್ಯ ನಡೆಸುತ್ತಿದೆ. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಎನ್​ಐಎ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿಕೊಳ್ಳಲಾಗುತ್ತಿದೆ.

No Comments

Leave A Comment