Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಬೀದರ್ ನಲ್ಲಿ ಟ್ರಕ್-ಆಟೋ ಮುಖಾಮುಖಿ ಡಿಕ್ಕಿ: ಮೃತರ ಸಂಖ್ಯೆ 7ಕ್ಕೆ ಏರಿಕೆ, 11 ಮಂದಿಗೆ ಗಾಯ

ಬೀದರ್: ಜಿಲ್ಲೆಯ ಚಿತ್ತಗುಪ್ಪಾ ತಾಲೂಕಿನ ಗ್ರಾಮದಲ್ಲಿ ಕಳೆದ ತಡರಾತ್ರಿ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಈ ಮಹಿಳೆಯರು ಕೂಲಿ ಕಾರ್ಮಿಕರಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೇಮಳಖೇಡ ಸರಕಾರಿ ಶಾಲೆಯ ಬಳಿ ಲಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಮೃತರನ್ನು ಪಾರ್ವತಿ (40 ವ), ಪ್ರಭಾವತಿ (36 ವ), ಗುಂಡಮ್ಮ (60 ವ ), ಯಾದಮ್ಮ (40 ವ ), ಜಗ್ಗಮ್ಮ (34 ವ ) ಈಶ್ವರಮ್ಮ (55 ವ) ಮತ್ತು ರುಕ್ಮಿಣಿ ಬಾಯಿ (60 ವ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವಾಹನಗಳ ಚಾಲಕರು ಸೇರಿದಂತೆ 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಮತ್ತು ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರಾಗಿದ್ದಾರೆ. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment