ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ ಲಗ್ಗೆ!
ಆಡಿಲೇಡ್: ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ 12ರ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು.
ಇನ್ನೂ ಸೆಮಿ ಫೈನಲ್ ಆಸೆಯನ್ನು ಕೈ ಬಿಟ್ಟಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾ ಆಸೆ ಜೀವಂತವಾಗಿದ್ದು, ಇದೇ ಮೈದಾನದಲ್ಲಿ ಇವರಿಬ್ಬರ ನಡುವೆ ನಡೆಯಲಿರುವ ಪಂದ್ಯದಲ್ಲಿ ಗೆದ್ದವರು ಸೆಮಿಫೈನಲ್ ಪ್ರವೇಶಿಸಲಿದ್ದಾರೆ.