Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ನವೆಂಬರ್ 19 ರಂದು ಬ್ಯಾಂಕ್ ಮುಷ್ಕರ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ)ದ ಸದಸ್ಯರು ನವೆಂಬರ್ 19 ರಂದು ದೇಶವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಬ್ಯಾಂಕ್ ಆಫ್ ಬರೋಡಾ ಸೋಮವಾರದ ನಿಯಂತ್ರಕ ಫೈಲಿಂಗ್‌ನಲ್ಲಿ, ಎಐಬಿಇಎ ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಿದ್ದಾರೆ. ತಮ್ಮ ಸದಸ್ಯರು ಬೇಡಿಕೆಗಳ ಈಡೇರಿಕೆಗಾಗಿ ಬೆಂಬಲಿಸಿ 19.11.2022ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ,” ಎಂದು ತಿಳಿಸಿದೆ.

ಈ ಮುಷ್ಕರದಿಂದಾಗಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಬ್ಯಾಂಕ್‌ಗಳು ತಿಳಿಸಿವೆ.

ನವೆಂಬರ್ 19 ಮೂರನೇ ಶನಿವಾರ. ಅಂದಹಾಗೆ ಎಲ್ಲಾ ಬ್ಯಾಂಕುಗಳು ಮೊದಲ ಮತ್ತು ಮೂರನೇ ಶನಿವಾರ ಕಾರ್ಯನಿರ್ವಹಿಸುತ್ತವೆ.

No Comments

Leave A Comment