Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಭಾರತೀಯ ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ನಾಟಕ ಹೈಕೋರ್ಟ್ ನಿವೃತ್ತ ಸಿಜೆ ಅವಸ್ತಿ ನೇಮಕ

ನವದೆಹಲಿ: ಕರ್ನಾಟಕ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ಭಾರತೀಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ತಿಳಿಸಿದ್ದಾರೆ.

ನ್ಯಾಯಮೂರ್ತಿ ಕೆ.ಟಿ.ಶಂಕರನ್, ಪ್ರೊಫೆಸರ್ ಆನಂದ್ ಪಲಿವಾಲ್, ಪ್ರೊಫೆಸರ್ ಡಿಪಿ ವರ್ಮಾ, ಪ್ರೊಫೆಸರ್ ರಕ ಆರ್ಯ ಮತ್ತು ಎಂ ಕರುಣಾನಿಧಿ ಅವರನ್ನು ಕಾನೂನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಸುಮಾರು ನಾಲ್ಕು ವರ್ಷಗಳ ನಂತರ ಮತ್ತೆ ಕಾನೂನು ಆಯೋಗ ರಚಿಸಿದ್ದು, ಭಾರತೀಯ ಕಾನೂನು ಆಯೋಗದ ಅಧ್ಯಕ್ಷರಾಗಿ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ರಿತುರಾಜ್ ಅವಸ್ತಿ ಅವರು ಕಳೆದ ಜುಲೈ 2 ರಂದು ನಿವೃತ್ತರಾಗಿದ್ದರು.

No Comments

Leave A Comment