Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಸುಪ್ರೀಂಕೋರ್ಟ್‌ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಳಗ್ಗೆ 10:00 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿ ಹೊಂದಿರುತ್ತಾರೆ. ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ನ್ಯಾ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ 2ನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಅವರ ತಂದೆ ನ್ಯಾ. ವೈ.ವಿ ಚಂದ್ರಚೂಡ್ ಅವರು ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ನ.11, 1959 ರಂದು ಜನಿಸಿದ ನ್ಯಾ.ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಅ.31, 2013 ರಿಂದ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವವರೆಗೆ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

No Comments

Leave A Comment