Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ

ಉಡುಪಿ, ನ 09. ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.

1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.

No Comments

Leave A Comment