Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಮಳಲಿ ಮಸೀದಿ ವಿವಾದ – ಮಹತ್ವದ ತೀರ್ಪು ಪ್ರಕಟ-ಮುಂದಿನ ವಿಚಾರಣೆ 2023 ಜ.8ಕ್ಕೆ

ಮಂಗಳೂರು, ನ 09: ನಗರದ ಹೊರವಲಯದ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್​​ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್​ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ತೀರ್ಪು ನೀಡಿದೆ.

ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ , ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ , ’ಈ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ’ ತೀರ್ಪು ನೀಡಿದೆ.

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಈ ಹಿನ್ನಲೆ ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು. ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್​ಗೆ ಅಧಿಕಾರ ಇಲ್ಲ , ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದು ಎಂದು ವಾದ ಮಂಡಿಸಿತ್ತು.

ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆ 2023 ಜ.8 ರಂದು ನಿಗದಿಯಾಗಿದೆ

No Comments

Leave A Comment