Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಶೋಪಿಯಾನ್ ಎನ್ಕೌಂಟರ್: ಜೆಇಎಂ ಉಗ್ರ ಸಂಘಟನೆ ಓರ್ವ ಭಯೋತ್ಪಾದಕ ಹತ, ಮುಂದುವರೆದ ಕಾರ್ಯಾಚರಣೆ

ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಶೋಪಿಯಾನ್’ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು.

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದೆ ಸೇನಾಪಡೆ ಎನ್ಕೌಂಟರ್ ಆರಂಭಿಸಿ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹತ್ಯೆಯಾದ ಉಗ್ರನನ್ನು ಕಮ್ರನ್ ಬಾಯ್ ಅಲಿಯಾಸ್ ಹನೀಸ್ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

No Comments

Leave A Comment