Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ: ಮನೆಗೆ ನುಗ್ಗಿ ನಗ-ನಗದು ದೋಚಿ ಕಳ್ಳರು ಪರಾರಿ

ಉಡುಪಿ, ನ 11 : ಉಡುಪಿಯ ಕೊರಂಗ್ರಪಾಡಿಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗದು ಸಹಿತ ಚಿನ್ನಾಭರಣ ಕದ್ದೊಯ್ದ ಘಟನೆ ನಡೆದಿದೆ.

ಕೊರಂಗ್ರಪಾಡಿಯ ಬೊಬ್ಬನಪಾದೆ ಶೆಟ್ಟಿ ಕಂಪೌಂಡ್‌ನಲ್ಲಿರುವ ಅಶ್ವಿನ್ ಪೆರಿಯೇರ ಎಂಬವರ ಬಾಡಿಗೆ ಮನೆಯಲ್ಲಿ ಪ್ರಸಾದ್ ಪೂಜಾರಿ (45) ಕುಟುಂಬ ಸಮೇತ ವಾಸವಾಗಿದ್ದರು. ನವೆಂಬರ್ 10 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರ ನಡುವೆ ಯಾರೋ ಕಳ್ಳರು ಮನೆಯ ಹಿಂಬಾಗಿಲು ಮುರಿದು ಮನೆಯೊಳಗಿನ ಗೋದ್ರೇಜ್ ಲಾಕರ್‌ನಲ್ಲಿದ್ದ 10 ಗ್ರಾಂ ಚಿನ್ನದ ಸರ ಮತ್ತು 18,000 ರೂಪಾಯಿ ನಗದು ದೋಚಿದ್ದಾರೆ. ಒಟ್ಟು 63,000ರೂ. ಮೌಲ್ಯದ ಸೊತ್ತು ಕಳವಾಗಿದೆ ಎಂದು ದೂರಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 162/2022 ಕಲಂ: 454, 380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

No Comments

Leave A Comment